ಸ್ಫರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ

UPSC-KPSC--1024x931
Published on

ತುಮಕೂರು: ಡಾ.ರಾಜಕುಮಾರ್ ಅಕಾಡೆಮಿ ಫಾರ್ ಸಿವಿಲ್ ಸರ್ವಿಸಸ್ ವತಿಯಿಂದ ಕೆಎಎಸ್ ಪ್ರಿಲಿಮ್ಸ್ ಆನ್‌ಲೈನ್ ತರಬೇತಿ ನೀಡಲು ಅಭ್ಯರ್ಥಿಗಳಿಗೆ ಸ್ಕಾಲರ್‌ಶಿಪ್ ಪರೀಕ್ಷೆ ನಡೆಯಲಿದೆ.

ಜಿಲ್ಲಾಡಳಿತ, ಹಾಗೂ ತುಮಕೂರು ವಿವಿ ಸಹಯೋಗದಲ್ಲಿ ಉಚಿತ ತರಬೇತಿ ನೀಡಲಾಗುತ್ತಿದ್ದು ತುಮಕೂರಿನ ಕೆಎಎಸ್ ಆಕಾಂಕ್ಷಿಗಳಿಗೆ ಮಾತ್ರ ಈ ಸ್ಕಾಲರ್‌ಶಿಪ್ ಪರೀಕ್ಷೆ ನಡೆಯಲಿದೆ.

ಪದವಿ ಪೂರ್ಣಗೊಳಿಸಿದ ಜಿಲ್ಲೆಯ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗವಹಿಸಬಹುದು. ಸ್ಕಾಲರ್‌ಶಿಪ್ ಪರೀಕ್ಷೆ ನಂತರ ಆಯ್ಕೆಯಾದ ಅಭ್ಯರ್ಥಿಗಳಿಗೆ ಡಾ.ರಾಜ್‌ಕುಮಾರ್ ಅಕಾಡೆಮಿ ವತಿಯಿಂದ ಉಚಿತ ಆನ್‌ಲೈನ್ ಕೆಎಎಸ್ ತರಬೇತಿ ನೀಡಲಾಗುತ್ತಿದೆ.

ಆಸಕ್ತರು https://forms.gle/XRtn6fRnRhzUnrUA9 ರಲ್ಲಿ ನೋಂದಣಿ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಡಾ.ರಾಜ್‌ಕುಮಾರ್ ಅಕಾಡೆಮಿ ಫಾರ್ ಸಿವಿಲ್ ಸರ್ವಿಸಸ್ www.drrrajkumaracademy.com ಅನ್ನು ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net