ದ್ವಿತೀಯ ಪಿಯು 2ನೇ ಪೂರಕ ಪರೀಕ್ಷೆ

karnataka-exam-660.webp
Published on

ತುಮಕೂರು: ದ್ವಿತೀಯ ಪಿಯು 2ನೇ ಪೂರಕ ಪರೀಕ್ಷೆ 13 ಪರೀಕ್ಷಾ ಕೇಂದ್ರಗಳಲ್ಲಿ ಆ.21ರಿಂದ ಸೆ.2ರ ವರೆಗೆ ನಡೆಯಲಿದೆ.

ಪರೀಕ್ಷೆಯೂ ಲೋಪದೋ಼ಷವಿಲ್ಲದೆ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಆದೇಶಿಸಿದ್ದಾರೆ.

ನಿಷೇಧಾಜ್ಞೆ ಪರೀಕ್ಷೆ ನಡೆಯುವ ದಿನ ಬೆಳಗ್ಗೆ 9 ಗಂಟೆಯಿAದ ಸಂಜೆ 5.30ರ ವರೆಗೆ ಜಾರಿಯಲ್ಲಿರುತ್ತದೆ. ಪರೀಕ್ಷೆ ನಡೆಯುವ ದಿನಾಂಕಗಳಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ e಼ೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚುವುದು, ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಅನಧಿಕೃತ ವ್ಯಕ್ತಿಗಳು ಯಾರೂ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ ಎಂದು ಸೂಚಿಸಿಲಾಗಿದೆ.

ಪರೀಕ್ಷೆಯ ಮುಖ್ಯ ಅಧೀಕ್ಷಕರಿಗೆ ಕ್ಯಾಮರಾ ಹೊಂದಿರುವ ಸಾಮಾನ್ಯ ಮೊಬೈಲ್ ಇರಿಸಿಕೊಳ್ಳಲು ಅವಕಾಶವಿದೆ. ಉಳಿದ ಎಲ್ಲ ಪರೀಕ್ಷಾ ಸಿಬ್ಬಂದಿ, ವಿದ್ಯಾರ್ಥಿಗಳು ಮೊಬೈಲ್ ತರುವುದು, ಉಪಯೋಗಿಸುವುದನ್ನು ನಿಷೇಧ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net