ವಸತಿ ಶಾಲೆಗಳ 6ನೇ ತರಗತಿ ಪ್ರವೇಶ

Schools
Published on

ತುಮಕೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಡಾ.ಎ.ಪಿ.ಜೆ ಅಬ್ದುಲ್​ ಕಲಾಂ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಏ.10ರ ವರೆಗೆ ವಿಸ್ತರಿಸಲಾಗಿದೆ.

ಪ್ರವೇಶ ಕಲ್ಪಿಸಲಾಗುವ ವಸತಿ ಶಾಲೆಗಳಲ್ಲಿ ಶೇ.75ರಷ್ಟು ಸ್ಥಾನಗಳನ್ನು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿ(ಮುಸ್ಲಿಂ, ಕ್ರಿಶ್ಚಿಯನ್​, ಜೈನ್​, ಬೌದ್ಧ, ಸಿಖ್​ ಮತ್ತು ಪಾರ್ಸಿ)ಗಳಿಗೆ ಹಾಗೂ ಶೇ25ರಷ್ಟು ಸ್ಥಾನಗಳನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಮೀಸಲಿರಿಸಲಾಗಿದೆ.

ವಸತಿ ಶಾಲೆ 6ನೇ ತರಗತಿ ಪ್ರವೇಶಕ್ಕಾಗಿ 5ನೇ ತರಗತಿಯಲ್ಲಿ ಉತ್ತೀರ್ಣರಾದ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸೇವಾ ಸಿಂಧು ಪೋರ್ಟಲ್​ ವಿಳಾಸ Admission for Morarji desai residential school ನಲ್ಲಿ ಸಲ್ಲಿಸಬಹುದು.

ಮಾಹಿತಿಗೆ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್​ ಭವನ, ಇಂದಿರಾ ಕಾಲೇಜು ಮುಂಭಾಗ, ಉಪ್ಪಾರಹಳ್ಳಿ, ತುಮಕೂರು ಅಥವಾ ದೂ.0816 2273724 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net