

ತುಮಕೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಗೆ ಜಿಲ್ಲೆಯಲ್ಲಿ 722523 ಫಲಾನುಭವಿಗಳಿದ್ದು 744 ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದೆ.
ಒಂದು ಕೇಂದ್ರದಲ್ಲಿ ದಿನಕ್ಕೆ 60 ಅರ್ಜಿ ಮಾತ್ರ ಸ್ವೀಕರಿಸಲು ಅವಕಾಶವಿದ್ದು ನೂಕುನುಗ್ಗಲು ಉಂಟಾಗುವ ಸಾಧ್ಯತೆಯಿದೆ.
ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವ ಸಂಬಂಧ ಯಾವುದೇ ಮಾಹಿತಿ ಅಗತ್ಯವಿದ್ದಲ್ಲಿ ರಾಜ್ಯ ಮಟ್ಟದ ಉಚಿತ ಸಹಾಯವಾಣಿ 1902 ಹಾಗೂ ತುಮಕೂರು ಜಿಲ್ಲಾ ಮಟ್ಟದಲ್ಲಿ 155304/ 0816 2213400 ಸಂಪರ್ಕಿಸಿ ಮಹಿತಿ ಪಡೆಯಬಹುದು.