

ತುಮಕೂರು: ರಾಜ್ಯದಲ್ಲಿ ಅಧಿಕಾರದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಡ ಜನರ ಹಿತ ಕಾಯುವಲ್ಲಿ ಸಂಪೂರ್ಣ ವಿಫಲವಾಗಿದೆ, ಗ್ಯಾರಂಟಿ ಗೊಂದಲದಲ್ಲಿ ಅಭಿವೃದ್ದಿಗೆ ಹಣ ಮೀಸಲಿಡದೆ ಜನತೆಗೆ ದ್ರೋಹ ಬಗೆದಿದೆ ಎಂದು ಅಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ದೂರಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದ ಕಾರ್ಯಕ್ರಮಗಳನ್ನು ನಕಲಿ ಮಾಡಿ ಅಧಿಕಾರಕ್ಕೇರಿದ ಕಾಂಗ್ರೆಸ್ ಅನುಷ್ಠಾನಕ್ಕೆ ತರುವಲ್ಲಿ ಎಡವಿದ ಪರಿಣಾಮ ಅಭಿವೃದ್ಧಿ ಮರೀಚಿಕೆಯಾಗಿದೆ ಎಂದರು.
ಕಾAಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿರುವುದಕ್ಕೆ ಆಳಂದ ಶಾಸಕ ಬಿ.ಆರ್.ಪಾಟೀಲ್ ಮತ್ತು ಇತರೆ 33 ಜನ ಶಾಸಕರು ಬರೆದಿರುವ ಪತ್ರವೇ ಸಾಕ್ಷಿ ಎಂದರು.
ಸುದ್ದಿಗೋಷ್ಠಿಯಲ್ಲಿ ಎಎಪಿ ಕಾರ್ಯದರ್ಶಿ ಬಿ.ಟಿ.ನಾಗಣ್ಣ, ಮಹಿಳಾ ಘಟಕದ ಅಧ್ಯಕ್ಷ ಕುಶಾಲಸ್ವಾಮಿ, ಜಿಲ್ಲಾಧ್ಯಕ್ಷ ಪ್ರೇಮಕುಮಾರ್, ಮುಖಂಡರಾದ ಮಧುಸೂಧನ್,ರುಕ್ಸಾನಾ ಭಾನು, ಜಯರಾಮಯ್ಯ, ಗೌಸ್ ಪೀರ್, ರಾಮಾಂಜನಪ್ಪ, ಗೋರಮಾರದಹಳ್ಳಿ ಮಂಜುನಾಥ್ ಇದ್ದರು.