

ತುಮಕೂರು: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಜ.27 ಮತ್ತು 28ರಂದು ತಿಪಟೂರು ತಾಲೂಕು ರಂಗಾಪುರ ಮಠದಲ್ಲಿ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ರಾಜ್ಯಮಟ್ಟದ ವರ್ಗ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಕಾರ್ಯದರ್ಶಿ ಎಚ್.ಕೆ.ಪ್ರವೀಣ್ ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿದ್ದು ವಿವಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಚಿಂತನೆ ಜಾಗೃತಗೊಳಿಸಲು ವರ್ಗ ನಡೆಯಲಿದೆ ಎಂರು.
ಜ.27ರಂದು ಬೆಳಗ್ಗೆ 10.30ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಸುಕ್ಷೇತ್ರ ಕೆರೆಗೋಡಿ ರಂಗಾಪುರ ಮಠದ ಶ್ರೀಗುರು ಪರದೇಶಿಕೇಂದ್ರ ಸ್ವಾಮೀಜಿ, ಎಬಿವಿಪಿ ರಾಷ್ಟ್ರೀಯ ಉಪಾಧ್ಯಕ್ಷ ಪ್ರೊ.ನಾಗಲಿಂಗಂ ರಾಜ್ಯ ಉಪಾಧ್ಯಕ್ಷ ಡಾ.ಅಜಯ್‌ಕುಮಾರ್, ವೈದ್ಯ ಡಾ.ಜಿ.ಎಸ್.ಶ್ರೀಧರ್ ಭಾಗವಹಿಸುವರು ಎಂದರು.
ಕಾರ್ಯಕ್ರಮದಲ್ಲಿ ಭಾರತದಲ್ಲಿ ಸಂಶೋಧನೆ ಮತ್ತು ಉನ್ನತ ಶಿಕ್ಷಣದ ಮಹತ್ವ',ನರೇಟಿವ್ ಬ್ಯುಲ್ಡಿಂಗ್, ಕ್ಯಾಂಪಸ್ ಮತ್ತು ಐಡಿಯಾಲಜಿ, ವಿಕಸಿತ ಭಾರತ ಸೇರಿದಂತೆ ಅನೇಕ ವಿಷಯಗಳ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ವಿಷಯ ಮಂಡನೆ, ಚರ್ಚೆ, ಸಂವಾದ ನಡೆಯಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಡಾ.ಪ್ರಥ್ವಿರಾಜ್ ಇದ್ದರು.