ದಲಿತರಿಗೆ ಪ್ರತ್ಯೇಕ ಸ್ಮಶಾನದ ಭರವಸೆ ನೀಡಿದ ತುಮಕೂರು ಎಸಿ

15_AC_Dalith_Meeting
Published on

ತುಮಕೂರು: ದಲಿತ ಸಮುದಾಯದವರು ಮರಣ ಹೊಂದಿದಾಗ ಅಂತ್ಯ ಸಂಸ್ಕಾರ ನಡೆಸಲು ಪ್ರತ್ಯೇಕವಾದ ಸ್ಮಶಾನ ಭೂಮಿ ಮಂಜೂರು ಮಾಡಬೇಕು ಎಂದು ದಲಿತ ಸಮುದಾಯದ ಮುಖಂಡರು ಆಗ್ರಹಿಸಿದರು.

ನಗರದ ಜಿಲ್ಲಾ ಬಾಲ ಭವನದಲ್ಲಿ ಶನಿವಾರ ಉಪವಿಭಾಗಾಧಿಕಾರಿ ಗೌರವ್‌ಕುಮಾರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ತುಮಕೂರು, ಗುಬ್ಬಿ ಹಾಗೂ ಕುಣಿಗಲ್ ತಾಲೂಕಿನ ದಲಿತ ಸಮುದಾಯದ ಮುಖಂಡರು ಭಾಗವಹಿಸಿದ್ದರು.

ಉಪವಿಭಾಗಾಧಿಕಾರಿ ಗೌರವ್ ಅವರು ಪ್ರತಿಕ್ರಿಯಿಸುತ್ತಾ, ಪರಿಶಿಷ್ಟ ಜಾತಿ ಮತ್ತು ಪಂಗಡದವರ ಹಿತ ಕಾಯುವ ಸಲುವಾಗಿಯೇ ಸಭೆ ನಡೆಸಲಾಗುತ್ತಿದೆ. ಯಾವುದೇ ಸಮಸ್ಯೆಯಿದ್ದರೂ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ದಲಿತರಿಗೆ ಪ್ರತ್ಯೇಕ ಸ್ಮಶಾನ ಭೂಮಿಯನ್ನು ಮೀಸಲಿಡಲು ಕ್ರಮವಹಿಸಲಾಗುವುದು. ಕೂಡಲೇ ಸಂಬAಧಿಸಿದ ತಹಶೀಲ್ದಾರರು ಪ್ರತ್ಯೇಕ ಸ್ಮಶಾನ ಭೂಮಿಗಾಗಿ ಜಾಗ ಗುರುತಿಸಿ ಪ್ರಸ್ತಾವನೆ ಸಲ್ಲಿಸಲು ಸೂಚಿಸುತ್ತೇನೆ ಎಂದರು.

ಸಾರ್ವಜನಿಕ ರುದ್ರಭೂಮಿಯಲ್ಲಿ ದಲಿತರು ಅಂತ್ಯಸಂಸ್ಕಾರ ಮಾಡಲು ಸಂವಿಧಾನದ ಅನುಚ್ಛೇದ 15ರಲ್ಲಿ ಅವಕಾಶ ನೀಡಲಾಗಿದೆ. ಸಾರ್ವಜನಿಕ ರುದ್ರಭೂಮಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಶವ ಸಂಸ್ಕಾರ ಮಾಡಲು ಅಡ್ಡಿಪಡಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ದಿನೇಶ್, ತಹಸೀಲ್ದಾರ್ ಸಿದ್ದೇಶ್ ಹಾಗೂ ಮಹಾಬಲೇಶ್ವರ, ತಾಪಂ ಇಒ ಜಯಪಾಲ್ ಹಾಗೂ ಪರಮೇಶ್, ಗುಬ್ಬಿ ತಾಲ್ಲೂಕು ಗ್ರೇಡ್-2 ತಹಶೀಲ್ದಾರ್ ಶಶಿಕಲಾ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net