

ತುಮಕೂರು: ತಾಲೂಕಿನ ಬೆಳಧರ ಸಮೀಪದದಲ್ಲಿ ಶನಿವಾರ ಸಂಜೆ ಖಾಸಗಿ ಬಸ್ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡು ತುಮಕೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ತುಮಕೂರಿನಿಂದ ಕೊರಟಗೆರೆ ಕಡೆಗೆ ತೆರಳುತ್ತಿದ್ದ ಕಾರು ಓವರ್ಟೇಕ್ ಮಾಡುವ ಆತುರದಲ್ಲಿ ಬಸ್ಗೆ ಮುಖಾಮುಖಿಯಾಗಿದೆ. ಮೃತರು ಹಾಗೂ ಗಾಯಾಳುಗಳ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.