

ತುಮಕೂರು: ಪಾದಚಾರಿಗಳಿಗೆ ಲಾರಿ ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಸ್ಥಳದ¯್ಲೆÃ ಸಾವನ್ನಪ್ಪಿರುವ ಘಟನೆ ತಾಲೂಕಿನ ಓಬಳಾಪುರದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ಓಬಳಾಪುರ ಅಂಜನಮೂರ್ತಿ(35) ಮೃತ, ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದಿದ್ದು ಪಕ್ಕದ ಹಳ್ಳಕ್ಕೆ ಪಲ್ಟಿಯಾಗಿದೆ.
ಲಾರಿ ಚಾಲಕ 35 ವರ್ಷದ ಬಿನೀರ್‌ಗೂ ಸಣ್ಣಪುಟ್ಟ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.