

ತುಮಕೂರು: ನಗರದ ರಸ್ತೆಗಳಲ್ಲಿ ಅತೀವೇಗದಿಂದ, ಶಬ್ಧ ಮಾಡಿಕೊಂಡು ಬೈಕ್ ಓಡಿಸುತ್ತಿದ್ದವನಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ಕ್ಯಾತಸಂದ್ರದ ಆರೀಪ್(40) ಎಂಬಾತ ಯಮಹಾ ಬೈಕ್‌ನಲ್ಲಿ ರಸ್ತೆಯಲ್ಲಿ ಶರವೇಗದಲ್ಲಿ ಬೈಕ್ ಚಲಾಯಿಸುತ್ತಿದ್ದ ವೀಡಿಯೋ ಸಮೇತ ಸಾರ್ವಜನಿಕರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ.
ಆರೋಪಿ ಆರೀಪ್ ವಾಹನವನ್ನು ವಶಕ್ಕೆ ಪಡೆದು, ಆತನ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಫೇಸ್‌ಬುಕ್ ಪೇಜ್‌ನಲ್ಲಿ ಪ್ರಕಟಿಸಿ, ಪುಂಡರಿಗೆ ಎಚ್ಚರಿಕೆ ರವಾನಿಸಿದ್ದಾರೆ.