ಕೋರಾ ನಾಡಕಚೇರಿಗೆ ಎಡಿಸಿ ಅನಿರೀಕ್ಷಿತ ಭೇಟಿ

ADC
Published on

ತುಮಕೂರು: ನಾಡ ಕಚೇರಿಗಳಲ್ಲಿ ಕಂದಾಯ ಇಲಾಖೆಗೆ ಸಂಬAಧಿಸಿದAತೆ ಸಾರ್ವಜನಿಕ ಸೇವೆಗಾಗಿ ನಿಗಧಿಪಡಿಸಿರುವ ಅರ್ಜಿ ಶುಲ್ಕದ ಫಲಕ ಎಲ್ಲರಿಗೂ ಕಾಣುವಂತೆ ಅಳವಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಸೂಚಿಸಿದರು.

ಬುಧವಾರ ತಾಲೂಕಿನ ಕೋರಾ ನಾಡಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿ ವಿವಿಧ ಕಡತಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಿಂಚಣಿ ಮಂಜೂರಾತಿ, ಪಹಣಿ ತಿದ್ದುಪಡಿ, ಮತ್ತಿತರ ಸೇವೆ ಕೋರಿ ಸಾರ್ವಜನಿಕರಿಂದ ಸ್ವೀಕರಿಸಲಾದ ಅರ್ಜಿಗಳನ್ನು ಬಾಕಿ ಇಟ್ಟುಕೊಳ್ಳದೆ ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದರು.

ಅರ್ಜಿದಾರರನ್ನು ವಿನಾಕಾರಣ ಕಚೇರಿಗೆ ಅಲೆದಾಡಿಸದೆ ಜವಾಬ್ದಾರಿಯಿಂದ ಸರ್ಕಾರಿ ಸೇವೆ ಸಲ್ಲಿಸಿ ಸಾರ್ವಜನಿಕರಿಗೆ ಕಾಲಮಿತಿಯೊಳಗೆ ಸರ್ಕಾರಿ ಸೌಲಭ್ಯಗಳನ್ನು ತಲುಪಿಸಬೇಕು ಎಂದರು.

ಕಂದಾಯ ನಿರೀಕ್ಷಕ ಅರುಣ್‌ಕುಮಾರ್ ಅರ್ಜಿಗಳ ವಿಲೇವಾರಿ ಪ್ರಗತಿ ಮಾಹಿತಿಗೆ ನೀಡಿದರು. ಗ್ರಾಮ ಲೆಕ್ಕಾಧಿಕಾರಿ ಅನಿಲ್‌ಕುಮಾರ್, ಕೋರಾ ವೃತ್ತದ ಗ್ರಾಮ ಆಡಳಿತ ಅಧಿಕಾರಿ ನಿರಂಜನ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net