ಪಡಿತರ ಚೀಟಿದಾರರಿಗೆ ಹೆಚ್ಚುವರಿ ಆಹಾರಧಾನ್ಯ

BPL card
Published on

ತುಮಕೂರು: ಅನ್ನಭಾಗ್ಯ ಯೋಜನೆಯಡಿ ಫೆಬ್ರವರಿಯಿಂದ ಜಾರಿಗೆ ಬರುವಂತೆ ನೇರ ನಗದು ವರ್ಗಾವಣೆ ಬದಲಾಗಿ ಅರ್ಹ ಫಲಾನುಭವಿಗಳಿಗೆ 5 ಕೆಜಿ ಹೆಚ್ಚುವರಿ ಅಕ್ಕಿಯನ್ನು ವಿತರಿಸಲಾಗುವುದು ಎಂದು ಆಹಾರ ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ ತಿಳಿಸಿದ್ದಾರೆ.

ಸರ್ಕಾರದ ಆದೇಶದನ್ವಯ ಸಾರ್ವಜನಿಕ ವಿತರಣಾ ಪದ್ಧತಿಯಡಿ ಆದ್ಯತಾ ಪಡಿತರ ಚೀಟಿ ಫಲಾನುಭವಿಗಳಿಗೆ ಫೆಬ್ರವರಿಯಿಂದ ಅನ್ವಯವಾಗುವಂತೆ 5 ಕೆ.ಜಿ. ಹೆಚ್ಚುವರಿ ಅಕ್ಕಿಯನ್ನು ಬಿಡುಗಡೆ ಮಾಡಲಾಗುತ್ತಿದೆ.

ಅಂತ್ಯೋದಯ ಪಡಿತರ ಚೀಟಿಗೆ 35 ಕೆ.ಜಿ. ಅಕ್ಕಿ, 4 ಮತ್ತು 4ಕ್ಕಿಂತ ಹೆಚ್ಚಿನ ಸದಸ್ಯರುಗಳ ಪಡಿತರ ಚೀಟಿಗಳಲ್ಲಿನ ಪ್ರತಿ ಫಲಾನುಭವಿಗೆ 5 ಕೆಜಿ ಹೆಚ್ಚುವರಿ ಅಕ್ಕಿ ಹಂಚಿಕೆ ಮಾಡಲಾಗುವುದು. ಆದ್ಯತಾ ಪಡಿತರ ಚೀಟಿ ಪ್ರತಿ ಸದಸ್ಯರಿಗೆ 5 ಕೆಜಿ ಹಾಗೂ 5 ಕೆಜಿ ಹೆಚ್ಚುವರಿ ಅಕ್ಕಿಯನ್ನು ಹಂಚಿಕೆ ಮಾಡಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net