ಕೃಷಿ ಮಾಹಿತಿಗಾಗಿ ಸಹಾಯವಾಣಿ ಕೇಂದ್ರ

KKK
Published on

ತುಮಕೂರು: ಬೆಳೆ ವಿಮೆ, ಬೆಳೆ ಸಮೀಕ್ಷೆ, ಪ್ರಧಾನ ಮಂತ್ರಿ ಕಿಸಾನ್ ಯೋಜನೆ, ಬೆಳೆ ವಿಮಾ ಪರಿಹಾರ ಸೇರಿದಂತೆ ಕೃಷಿ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ರೈತರಿಗೆ ಮಾಹಿತಿ ನೀಡಲು ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಸ್ಥಾಪಿಸಿರುವ ಸಹಾಯವಾಣಿ ಕೇಂದ್ರಕ್ಕೆ ಶುಕ್ರವಾರ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಚಾಲನೆ ನೀಡಿದರು.

ರೈತರು ಕೃಷಿ ಸಂಬAಧಿತ ಕಾರ್ಯಕ್ರಮ, ಯೋಜನೆಗಳ ಮಾಹಿತಿಯನ್ನು ಸಹಾಯವಾಣಿ ಸಂಖ್ಯೆ: 8884006306, 8884006308, 0816-2278474ಕ್ಕೆ ಕರೆ ಮಾಡಿ ಪಡೆಯಬಹುದು. ಸಹಾಯವಾಣಿ ಬೆಳಗ್ಗೆ 10 ರಿಂದ ಸಂಜೆ 5ರ ವರೆಗೂ ಕಾರ್ಯನಿರ್ವಹಿಸಲಿದೆ.

ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ರಮೇಶ್, ಉಪ ನಿರ್ದೇಶಕ ಆಶೋಕ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net