

ತುಮಕೂರು: ಕರ್ನಾಟಕ ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿಗೆ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಗಂಗಾಕಲ್ಯಾಣ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ(ಹೊಸತು), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ಸ್ವಯಂ ಉದ್ಯೋಗ ಸಾಲ ಯೋಜನೆ(ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ)ಗಳಡಿ ಸಾಲ ಸೌಲಭ್ಯಕ್ಕಾಗಿ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದವರಿಂದ ಸೇವಾಸಿಂಧು ಪೋರ್ಟಲ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಕರ್ನಾಟಕ ಒನ್, ಜನಸ್ನೇಹಿ ಕೇಂದ್ರ, ನಾಗರೀಕ ಸೇವಾ ಕೇಂದ್ರ ಹಾಗೂ ಗ್ರಾಮಒನ್ ಮೂಲಕ ಸೇವಾಸಿಂಧು ಪೋರ್ಟಲ್‌ನಡಿ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ
ನಿಗಮದ ವೆಬ್‌ಸೈಟ್ https://kaad.karnataka.gov.in ಅಥವಾ ಸಹಾಯವಾಣಿ 080-22374832, ಮೊ.9606066389 ಅಥವಾ ಜಿಲ್ಲಾ ಕಚೇರಿ ದೂ.0816-2005008 ಸಂಪರ್ಕಿಸಿ.