

ತುಮಕೂರು: ಕರ್ನಾಟಕ ಅಲೆಮಾರಿ, ಅರೆಅಲೆಮಾರಿ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಹಿಂದುಳಿದ ವರ್ಗಗಳ ಪ್ರವರ್ಗ-1ಕ್ಕೆ ಸೇರುವ ಅಲೆಮಾರಿ, ಅರೆ ಅಲೆಮಾರಿ ಸಮುದಾಯದವರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ, ಗಂಗಾಕಲ್ಯಾಣ, ಅರಿವು-ಶೈಕ್ಷಣಿಕ ಸಾಲ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ, ಸ್ವಾವಲಂಬಿ ಸಾರಥಿ, ಸ್ವಯಂ ಉದ್ಯೋಗ ಸಾಲಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು ಆ.31ರೊಳಗಾಗಿ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಗ್ರಾಮ ಒನ್, ಕರ್ನಾಟಕ ಒನ್, ತುಮಕೂರು ಒನ್ ಹಾಗೂ ಬೆಂಗಳೂರು ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
ಮಾಹಿತಿಗೆ ಡಿ.ದೇವರಾಜ ಅರಸು, ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರ ಕಚೇರಿ ಅಥವಾ ದೂ.0816 -2005008, ನಿಗಮದ ಸಹಾಯವಾಣಿ ಸಂಖ್ಯೆ: 080-22374832, 8050770004, 8050770005 ಸಂಪರ್ಕಿಸಿ.