

ತುಮಕೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ನಗರದ ಅಮಾನಿಕೆರೆಯಲ್ಲಿ ಹಮ್ಮಿಕೊಂಡಿರುವ ಸಂಗೀತ ಕಾರಂಜಿ ಹಾಗೂ ಬೋಟಿಂಗ್‌ಗೆ ರಜಾದಿನವಾಗಿದ್ದ ಭಾನುವಾರ ನಗರವಾಸಿಗಳಿಂದ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ.
ಆರಂಭದ ಎರಡು ದಿನ ಮಾತ್ರ ಮಹಿಳೆಯರಿಗೆ ಉಚಿತ ಬೋಟಿಂಗ್ ಅವಕಾಶ ಕಲ್ಪಿಸಲಾಗಿತ್ತು, ಭಾನುವಾರ 800ಕ್ಕೂ ಹೆಚ್ಚು ಮಕ್ಕಳು ಬೋಟಿಂಗ್‌ನಲ್ಲಿ ಪಾಲ್ಗೊಂಡು ಖುಷಿಪಟ್ಟರು.
ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಕೂಡ ಕೆಲವೊತ್ತು ಮಕ್ಕಳ ಜತೆ ಕಾಲ ಕಳೆದು ಸ್ವಾತಂತ್ರ್ಯ ಹೋರಾಟದ ಬಗ್ಗೆ ಮಾತನಾಡಿದರು. ಮನೆ ಮನೆಯಲ್ಲಿ ರಾಷ್ಟ್ರಧ್ವಜ ಅಭಿಯಾನ, ರಾಷ್ಟ್ರಧ್ವಜದ ಮಹತ್ವ ಪ್ರಸಾರವಾಗಬೇಕು ಎಂದರು.
ಸ್ಮಾರ್ಟ್ಸಿಟಿ ಲಿ., ವ್ಯವಸ್ಥಾಪಕ ನಿರ್ದೇಶಕ ಬಿ.ಟಿ.ರಂಗಸ್ವಾಮಿ, ಟೂಡಾ ಆಯುಕ್ತ ಜಾದವ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ತಹಸೀಲ್ದಾರ್ ಸಿದ್ದೇಶ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತ್ಯಾಗರಾಜ್ ಇದ್ದರು.