

ತುಮಕೂರು: ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಏ.14ರಂದು ನಗರದ ಬಿಜಿಎಸ್ ವೃತ್ತದಿಂದ ಮಧ್ಯಾಹ್ನ 12ಕ್ಕೆ ವಿವಿಧ ಜನಪದ ಕಲಾತಂಡಗಳೊಂದಿಗೆ ಭವ್ಯ ಮೆರವಣಿಗೆಯನ್ನು ಏರ್ಪಡಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಸ್.ಕೃಷ್ಣಪ್ಪಗೆ ಮೆರವಣಿಗೆ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಸೂಚಿಸಿದರು. ಮೆರವಣಿಗೆಯಲ್ಲಿ ಜಿಲ್ಲೆಯ ಸಾಂಸ್ಕತಿಕ ಪರಂಪರೆಯನ್ನು ಪ್ರತಿಬಿಂಬಿಸುವ ಸ್ಥಳಿಯ ಕಲಾ ತಂಡಗಳಿಂದ ಪ್ರದರ್ಶನ ಏರ್ಪಡಿಸಬೇಕು ಎಂದರು.
ನಂತರ ಮಹಾನಗರಪಾಲಿಕೆ ಆವರಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 1000 ಕೆಜಿ ಕಂಚಿನ ಪ್ರತಿಮೆ ಅನಾವರಣಗೊಳಿಸಲು ತಯಾರಿ ಮಾಡಿಕೊಳ್ಳಬೇಕು. ದೇಶದ ಮಹಾನ್ ನಾಯಕರಿಗೆ ಗೌರವ ಸೂಚಿಸುವ ಮಹತ್ವದ ಕಾರ್ಯಕ್ರಮ ಇದಾಗಿದ್ದು, ಸ್ಥಳಿಯ ಸಮುದಾಯ, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಂಘಗಳು ಸೇರಿದಂತೆ ವಿವಿಧ ಸಂಘಟನೆಗಳು ಪಾಲ್ಗೊಳ್ಳುವಂತೆ ವ್ಯವಸ್ಥೆ ಮಾಡಬೇಕು ಎಂದರಲ್ಲದೆ, ಮೆರವಣಿಗೆ ಸಮಯದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ತುರ್ತು ಚಿಕಿತ್ಸಾ ವಾಹನ, ಅಗ್ನಿಶಾಮಕ ವಾಹನ ವ್ಯವಸ್ಥೆ ಮಾಡಬೇಕು ಎಂದರು/