

ತುಮಕೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ವತಿಯಿಂದ ರೈತರಿಗೆ ಆಧುನಿಕ ಹೈನುಗಾರಿಕೆ ಮತ್ತು ಆಧುನಿಕ ಕೋಳಿ ಸಾಕಾಣಿಕೆ ತರಬೇತಿ ಕುರಿತು ಆಸಕ್ತ 25ಜನ ರೈತರಿಗೆ ಉಚಿತ ತರಬೇತಿ ನೀಡಲಾಗುವುದು ಎಂದು ಮುಖ್ಯ ಪಶುವೈದ್ಯಾಧಿಕಾರಿ ತಿಳಿಸಿದ್ದಾರೆ.
ಆಧುನಿಕ ಹೈನುಗಾರಿಕೆ ತರಬೇತಿಯನ್ನು ಜುಲೈ 8 ಮತ್ತು 9ರಂದು, ಆಧುನಿಕ ಕೋಳಿ ಸಾಕಾಣಿಕೆ ತರಬೇತಿಯನ್ನು ಜುಲೈ 11 ಮತ್ತು 12ರಂದು ಹಮ್ಮಿಕೊಳ್ಳಲಾಗಿದೆ. ನಿಗದಿಪಡಿಸಿದ ದಿನಾಂಕದAದು ಬೆಳಗ್ಗೆ 10 ಗಂಟೆಗೆ ತರಬೇತಿಗೆ ಹಾಜರಾಗಬಹುದು.
ತರಬೇತಿಗೆ ಹಾಜರಾಗಲು ಇಚ್ಛಿಸುವವರು 2 ಪಾಸ್‌ಪೋರ್ಟ್ ಅಳತೆ ಭಾವಚಿತ್ರ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ತರಬೇಕು.
ಮಾಹಿತಿಗಾಗಿ ಹತ್ತಿರದ ಪಶುವೈದ್ಯಕೀಯ ಸಂಸ್ಥೆ, ದೂ.0816 2251214 ಸಂಪರ್ಕಿಸಿ.