ಕೊಬ್ಬರಿ ಕನಿಷ್ಟ ಬೆಂಬಲ ಹೆಚ್ಚಿಸಲು ಕೇಂದ್ರ ಸಚಿವರಿಗೆ ಮನವಿ; ಶೋಭಾ ಕರಂದ್ಲಾಜೆ ನೇತೃತ್ವದ ನಿಯೋಗ

IMG-20231221-WA0134 (1)
Published on

ತುಮಕೂರು: ಕೊಬ್ಬರಿಗೆ ಕನಿಷ್ಟ ಬೆಂಬಲ ಬೆಲೆ ಹೆಚ್ಚಿಸಬೇಕು ಹಾಗೂ ಕೊಬ್ಬರಿ ಖರೀದಿ ಆರಂಭಿಸಬೇಕು ಎಂದು ಕೇಂದ್ರ ಕೃಷಿ ಸಚಿವ ಮತ್ತು ರೈತ ಕಲ್ಯಾಣ ಸಚಿವ ಅರ್ಜುನ ಮುಂಡಾ ಅವರನ್ನು ದೆಹಲಿಯಲ್ಲಿ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದ ನಿಯೋಗ ಭೇಟಿಯಾಗಿ ಮನವಿ ಮಾಡಿದೆ.

ದೆಹಲಿಯಲ್ಲಿ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಗುರುವಾರ ಶಾಸಕ ಬಿ.ಸುರೇಶ್‌ಗೌಡ, ಮಾಜಿ ಸಚಿವ ಎಚ್.ಡಿ.ರೇವಣ್ಣ, ಶ್ರವಣ ಬೆಳಗೊಳದ ಶಾಸಕ ಎಚ್.ಸಿ.ಬಾಲಕೃಷ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಭೇಟಿಯಾಗಿ ಮನವಿ ಸಲ್ಲಿಸಿದರು.

ತುಮಕೂರು, ಹಾಸನ ಸೇರಿ 17 ಜಿಲ್ಲೆಯಲ್ಲಿ ಕೊಬ್ಬರಿ ಬೆಳೆಗಾರರು ಇದ್ದು ಬೆಲೆ ಪಾತಾಳಕ್ಕಿಳಿದಿದೆ, ಕೂಡಲೇ ಕನಿಷ್ಟ ಬೆಂಬಲ ಬೆಲೆಯಲ್ಲಿ ಖರೀದಿ ಆರಂಭಿಸಬೇಕು ಎಂಬ ನಿಯೋಗದ ಮನವಿಗೆ ಸ್ಪಂದಿಸಿರುವ ಅರ್ಜುನ ಮುಂಡಾ ಶೀಘ್ರದಲ್ಲಿಯೇ ಖರೀದಿ ಆರಂಭಿಸುವ ಭರವಸೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net