ಅಲ್ಪಸಂಖ್ಯಾತರಿಂದ ಅರ್ಜಿ

application
Published on

ತುಮಕೂರು: ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ, ಸಿಖ್ಖಲಿಗಾರ ಸಮುದಾಯದ ಜನರ ಆರ್ಥಿಕ ಸಬಲೀಕರಣಕ್ಕೆ ಪ್ರೋತ್ಸಾಹ ಹಾಗೂ ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆಯಡಿ ಸಾಲ, ಸಹಾಯಧನ ಸೌಲಭ್ಯ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.


ಆರ್ಥಿಕ ಸಬಲೀಕರಣ ಹೊಂದಲಿಚ್ಛಿಸುವ ಸಿಖ್ಖಲಿಗಾರ ಸಮುದಾಯದವರು ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಬಹುದು. ಸಹಾಯಧನ ಸೌಲಭ್ಯ ಪಡೆಯ ಬಯಸುವ ಮಹಿಳಾ ಸ್ವಸಹಾಯ ಗುಂಪುಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮಹಿಳೆಯರು ಮಾತ್ರ ಈ ಸೌಲಭ್ಯ ಪಡೆಯಬಹುದು.


ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕಾಗಿ ಸಾಲ ಸೌಲಭ್ಯ ಪಡೆಯಲು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರೆೃಸ್ತ, ಜೈನ, ಬೌದ್ಧ, ಸಿಖ್​ ಹಾಗೂ ಪಾರ್ಸಿ ಜನಾಂಗದವರಾಗಿರಬೇಕು.


ಸಾಲ, ಸಹಾಯಧನ ಸೌಲಭ್ಯ ಪಡೆಯಲಿಚ್ಛಿಸುವ ಅಲ್ಪಸಂಖ್ಯಾತ ಸಮುದಾಯದವರು ಜಾಲತಾಣ ಞಛ್ಚಟ್ಞ್ಝಜ್ಞಿಛಿ.ಚ್ಟ್ಞಚಠಿಚಚ.ಜಟಡ.ಜ್ಞಿ
ಮೂಲಕ ಆ.31ರೊಳಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಆಜಾದ್​ ಭವನ, ಇಂದಿರಾ ಕಾಲೇಜು ಮುಂಭಾಗ, ಉಪ್ಪಾರಹಳ್ಳಿ, ತುಮಕೂರು-. ಇವರಿಗೆ ಅರ್ಜಿ ಸಲ್ಲಿಸಬಹುದು.

ಮಾಹಿತಿ ದೂ.0816-2281023 ಸಂಪಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net