

ತುಮಕೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ(ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೋತ್ತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ)ಗಳ ಪ್ರವೇಶಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಜಾಲತಾಣ https://shp.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಪ್ರವೇಶಾತಿಯಲ್ಲಿ ಅಲ್ಪಸಂಖ್ಯಾತ ಸಮುದಾಯದವರಿಗೆ ಶೇ.75ರಷ್ಟು ಹಾಗೂ ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ, ಇತರೆ ಹಿಂದುಳಿದ ವರ್ಗಕ್ಕೆ ಶೇ.25ರಷ್ಟು ಸ್ಥಾನ ಮೀಸಲಿಡಲಾಗಿದೆ.
ಮಾಹಿತಿಗೆ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಇಂದಿರಾ ಕಾಲೇಜು ಮುಂಭಾಗ, ಉಪ್ಪಾರಹಳ್ಳಿ, ತುಮಕೂರು-. ದೂ.0816- 2273724 ಸಂಪರ್ಕಿಸಿ.