6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ

Mizo schools
Published on

ತುಮಕೂರು: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಡಾ.ಎ.ಪಿ.ಜೆ.ಅಬ್ದುಲ್​ ಕಲಾಂ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ 5ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಆನ್​ಲೈನ್​ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ಸಮುದಾಯ(ಮುಸ್ಲಿಂ, ಕ್ರಿಶ್ಚಿಯನ್​, ಜೈನ್​, ಬೌದ್ಧ, ಸಿಖ್​ ಮತ್ತು ಪಾರ್ಸಿ)ಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಶೇ.75ರಷ್ಟು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಸ್ಥಾನ ಮೀಸಲಿರಿಸಲಾಗಿದೆ.

ಅರ್ಜಿಯನ್ನು ಮಾರ್ಚ್​ 10ರೊಳಗಾಗಿ ಸೇವಾ ಸಿಂಧು ಪೋರ್ಟಲ್​ https://sevasindhuservices.karnataka.gov.in ನಲ್ಲಿ ಸಲ್ಲಿಸಬಹುದು.

ಮಾಹಿತಿಗೆ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್​ ಭವನ, ಇಂದಿರಾ ಕಾಲೇಜು ಮುಂಭಾಗ, ಉಪ್ಪಾರಹಳ್ಳಿ, ತುಮಕೂರು. ದೂ.0816- 2273724 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net