

ತುಮಕೂರು: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೈಸೂರು ಜಿಲ್ಲೆ ಯಾದವಗಿರಿ ಶ್ರೀ ರಾಮಕೃಷ್ಣ ವಿದ್ಯಾಶಾಲೆಯಲ್ಲಿ 8ನೇ ತರಗತಿ ದಾಖಲಾತಿಗಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿ ಹಾಗೂ ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಪ್ರತಿಭಾವಂತ ಗಂಡು ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವವರು 7ನೇ ತರಗತಿ ಉತ್ತೀರ್ಣರಾಗಿರಬೇಕು. 8ನೇ ತರಗತಿ ದಾಖಲಾತಿಗೆ ಪರಿಶಿಫ್ಟಿ ಜಾತಿ/ವರ್ಗಕ್ಕೆ ಸೇರಿದ 2 ಗಂಡು ಮಕ್ಕಳು ಮತ್ತು ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಫಿಕರ ಪ್ರತಿಭಾವಂತ 2 ಗಂಡು ಮಕ್ಕಳನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಶ್ರೀ ರಾಮಕೃಷ್ಣ ವಿದ್ಯಾಶಾಲೆ, ಯಾದವಗಿರಿ, ಮೈಸೂರು-. ಇಲ್ಲಿ ಏಪ್ರಿಲ್ 12ರಂದು ಬೆಳಗ್ಗೆ 10ಕ್ಕೆ ಪ್ರವೇಶ ಪರೀಕ್ಷೆ ನಡೆಯಲಿದೆ.