

ತುಮಕೂರು: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಸಾಮಾನ್ಯ ಪದವಿ ಮಟ್ಟದ ಕೋರ್ಸ್, ವೃತ್ತಿಪರ ಕೋರ್ಸ್ ಮತ್ತು ಸ್ನಾತಕೋತ್ತರ ಕೋರ್ಸ್ ಪ್ರವೇಶಕ್ಕಾಗಿ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದಲ್ಲಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವರ್ಗದವರಿಗೆ ಶೇ.75ರಷ್ಟು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಕ್ಕೆ ಶೇ.25ರಷ್ಟು ಸ್ಥಾನಗಳು ಮೀಸಲಿಡಲಾಗಿದೆ. ಆಸಕ್ತರು ಜಾಲತಾಣ
https://shp.karnataka.gov.in ಮೂಲಕ ಅ.5ರೊಳಗೆ ಅರ್ಜಿ ಸಲ್ಲಿಸಬಹುದು.
ಮಾಹಿತಿಗೆ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಇಂದಿರಾ ಕಾಲೇಜು ಮುಂಭಾಗ, ಉಪ್ಪಾರಹಳ್ಳಿ, ತುಮಕೂರು. ಅಥವಾ ದೂ.0816 -2273724 ಸಂಪರ್ಕಿಸಿ.