ಸದಸ್ಯರ ನೇಮಕಕ್ಕೆ ಅರ್ಜಿ

application
Published on

ತುಮಕೂರು: ಕರ್ನಾಟಕ ಮೇದರ ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ ಅನುಷ್ಠಾನ ಮಾಡುವ ವಿವಿಧ ಯೋಜನೆಗಳಡಿ ಸೇವಾಸಿಂಧು ಪೋರ್ಟಲ್​ ಮೂಲಕ ಸ್ವೀಕೃತ ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ರಚಿಸಲಾಗಿರುವ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಮಿತಿಗೆ 5 ಸದಸ್ಯರನ್ನು ಆಯ್ಕೆ ಮಾಡಲಾಗುವುದು. ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ನ.15ರೊಳಗಾಗಿ ಸಲ್ಲಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net