ಬಿವಿಎ ತರಗತಿ ಪ್ರವೇಶಕ್ಕಾಗಿ ಅರ್ಜಿ

Application
Published on

ತುಮಕೂರು: ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿ(ಕಾವಾ)ನಲ್ಲಿ 2025-&26ನೇ ಸಾಲಿನ ಪ್ರಥಮ ಬ್ಯಾಚುಲರ್​ ಆಫ್​ ವಿಜ್ಯುಯಲ್​ ಆರ್ಟ್ಸ್​(ಬಿವಿಎ) ತರಗತಿಗಳ ಪ್ರವೇಶಾತಿಗಾಗಿ ಆನ್​ಲೈನ್​ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪದವಿಯು 4 ವರ್ಷ ಅವಧಿಯ 8 ಸೆಮಿಸ್ಟರ್​ಗಳಲ್ಲಿ ಎಸ್​.ಇ.ಪಿ. ಪದ್ಧತಿಯಲ್ಲಿ ನಡೆಯಲಿದ್ದು, 3ನೇ ಸೆಮಿಸ್ಟರ್​ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್​ ಕಲೆ(ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.

ದ್ವೀತಿಯ ಪಿಯುಸಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಜಾಲತಾಣ: ಮೂಲಕ ಜೂನ್​ 10ರೊಳಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅರ್ಹತಾ ಪರೀಕ್ಷೆಯ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು. ಹೆಚ್ಚಿನ ಮಾಹಿತಿಗೆ ಸಹಾಯವಾಣಿ 0821- 2438931 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net