ಶುಲ್ಕ ಮರುಪಾವತಿ ಸೌಲಭ್ಯಕ್ಕೆ ಅರ್ಜಿ

Application
Published on

ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ, ವೃತ್ತಿಪರ ಸ್ನಾತಕೋತ್ತರ ಪದವಿ ಮತ್ತು ನರ್ಸಿಂಗ್​ ಕೋರ್ಸ್​ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ನೀಡುವ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್​ 31ರವರೆಗೆ ವಿಸ್ತರಿಸಿದೆ.

ಆಸಕ್ತ ವಿದ್ಯಾರ್ಥಿಗಳು ಆನ್​ಲೈನ್​ ಮೂಲಕ ಮಾ.31ರೊಳಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ಸಹಾಯವಾಣಿ 8050770005, ದೂ.1902 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net