

ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 2024-25ನೇ ಸಾಲಿನ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನ ಸೌಲಭ್ಯಕ್ಕಾಗಿ ಅರ್ಹ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್.ಡಿ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ಡಿಸೆಂಬರ್ 5ರೊಳಗಾಗಿ ಸಲ್ಲಿಸಬಹುದಾಗಿದು.
ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://bcwd.karnataka.gov.in ಅಥವಾ ಸಹಾಯವಾಣಿ 8050770004ನ್ನು ಸಂಪರ್ಕಿಸಿ.