

ತುಮಕೂರು: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು ಮತ್ತು ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಅತಿಥಿ ಉಪನ್ಯಾಸಕರ ಹುದ್ದೆ ಹಾಗೂ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಭರ್ತಿ ಮಾಡಿದ ಅರ್ಜಿಯನ್ನು ಮೇ.19ರೊಳಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಕಚೇರಿ, ಮೌಲಾನಾ ಆಜಾದ್ ಭವನ, ಇಂದಿರಾ ಕಾಲೇಜು ಮುಂಭಾಗ, ಉಪ್ಪಾರಹಳ್ಳಿ, ತುಮಕೂರು.-572102 ಇವರಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ದೂ.0816 -2273724 ಸಂಪರ್ಕಿಸಿ.