ಜಾನಪದ ತರಬೇತಿ ಶಿಬಿರಕ್ಕೆ ಅರ್ಜಿ

folk
Published on

ತುಮಕೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯುವಜನ ಮೇಳ ಹಾಗೂ ಯುವಜನೋತ್ಸವ ಕಾರ್ಯಕ್ರಮಗಳಲ್ಲಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳನ್ನು ಭಾಗವಹಿಸಲು ಉತ್ತೇಜಿಸುವ ನಿಟ್ಟಿನಲ್ಲಿ ಆಯೋಜಿಸಿರುವ ಕಲಾ ಪ್ರಕಾರಗಳ ಜಾನಪದ ತರಬೇತಿ ಶಿಬಿರಕ್ಕೆ ಪರಿಶಿಷ್ಟ ಜಾತಿ ಯುವಜನರಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತ ಯುವಜನರು ಭರ್ತಿ ಮಾಡಿದ ಅರ್ಜಿಯನ್ನು ಡಿ.18ರೊಳಗೆ ನಿಗಧಿತ ನಮೂನೆಯೊಂದಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು. ಮಾಹಿತಿಗೆ ಮೊ.9741691379 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net