

ತುಮಕೂರು: ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ವತಿಯಿಂದ 2023-24ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ವ್ಯಾಪ್ತಿಯಲ್ಲಿ ಬರುವ ಉಪಜಾತಿಗಳಿಗೆ ಸೇರಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ, ಉದ್ಯಮಶೀಲತಾ ಯೋಜನೆ , ಉದ್ಯಮಶೀಲತಾ ಯೋಜನೆ, ಮೈಕ್ರೋ ಕ್ರೇಡಿಟ್‌ಯೋಜನೆ, ಭೂ ಒಡೆತನ ಯೋಜನೆ, ಗಂಗಾಕಲ್ಯಾಣ ಯೋಜನೆಯಡಿ ನಿಗಮದಿಂದ ಸಾಲ ಸೌಲಭ್ಯ ನೀಡಲಾಗುತ್ತಿದೆ.
ಅರ್ಜಿ ಸಲ್ಲಿಸಲು ನ.29 ಕೊನೆಯ ದಿನವಾಗಿದ್ದು ಮಾಹಿತಿಗೆ https://Sevasindhu.karnataka.gov.in ಅಥವಾ ಜಿಲ್ಲಾ ವ್ಯವಸ್ಥಾಪಕ, ಕರ್ನಾಟಕ ಆದಿಜಾಂಬವ ಅಭಿವೃಧ್ದಿ ನಿಗಮ. ಆಯಾ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ತಾಲೂಕು ಅಭಿವೃದ್ಧಿ ಅಧಿಕಾರಿ ಸಂಪರ್ಕಿಸಿ.