

ತುಮಕೂರು: ರುಡ್ಸೆಟ್ ಸಂಸ್ಥೆ ವತಿಯಿಂದ ಜೂನ್ 17 ರಿಂದ ಅಣಬೆ ಬೇಸಾಯ ಕುರಿತು 10 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ತರಬೇತಿ ಪಡೆಯಲಿಚ್ಛಿಸುವ ಗ್ರಾಮೀಣ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.
ತರಬೇತಿಯು ವಸತಿಯುತವಾಗಿದ್ದು, ತರಬೇತಿ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ಸೌಲಭ್ಯ ಕಲ್ಪಿಸಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊ.9740982585, 9241482541, 9113880324 ಸಂಪರ್ಕಿಸಿ.