ರಾಷ್ಟ್ರ ಪ್ರಶಸ್ತಿಗಾಗಿ ಅರ್ಜಿ

Application
Published on

ತುಮಕೂರು: "ವಿಶ್ವ ವಿಕಲಚೇತನ ದಿನಾಚರಣೆ' ಅಂಗವಾಗಿ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ ಹಾಗೂ ನವದೆಹಲಿಯ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದ ವತಿಯಿಂದ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆಗೈದ ವ್ಯಕ್ತಿ, ಸಂಸ್ಥೆಗಳಿಗೆ "ರಾಷ್ಟ್ರ ಪ್ರಶಸ್ತಿ' ನೀಡಲು ಆನ್​ಲೈನ್​ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಇಚ್ಚಿಸುವವರು ಜುಲೈ 31ರೊಳಗಾಗಿ ವೆಬ್​ಸೈಟ್​ ಮೂಲಕ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಿ, ಸ್ವೀಕೃತಿಯೊಂದಿಗೆ ಹಾರ್ಡ್​ ಪ್ರತಿಯನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಕಲ್ಯಾಣಾಧಿಕಾರಿ ಕಚೇರಿ, ಜಿಲ್ಲಾ ಬಾಲಭವನ ಆವರಣ, ಎಂ.ಜಿ.ರಸ್ತೆ, ತುಮಕೂರು ಇಲ್ಲಿಗೆ ಸಲ್ಲಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net