

ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಅಲೆಮಾರಿ, ಅರೆ ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ ನೀಡಲು ಅರ್ಹರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 15ರವರೆಗೆ ವಿಸ್ತರಿಸಲಾಗಿದೆ.