

ತುಮಕೂರು: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಜಿಲ್ಲೆಯ `ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸದಸ್ಯರಿಗಾಗಿ ಕುರಿ, ಮೇಕೆ ಘಟಕ ಸ್ಥಾಪಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಇಡೀ ಜಿಲ್ಲೆಗೆ ವಿಶೇಷ ಘಟಕ ಯೋಜನೆಯಡಿಯಲ್ಲಿ 5 ಕುರಿ, ಮೇಕೆ ಮತ್ತು ಗಿರಿಜನ ಉಪಯೋಜನೆಯಡಿಯಲ್ಲಿ 2 ಘಟಕ ನಿರ್ಮಿಸಲು ಮಾತ್ರ ಅವಕಾಶವಿದ್ದು ಸಕಾಷ್ಟು ಜನ ಅರ್ಹರಿದ್ದರೂ ಯೋಜನೆ ಲಭ್ಯವಾಗುವುದು ಕಷ್ಟವಾಗಿದೆ.
ಅರ್ಜಿ ನಮೂನೆಗಳನ್ನು ಆಯಾ ತಾಲೂಕು ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ, ನಿಯಮಿತ ಕಚೇರಿಯಿಂದ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಭರ್ತಿ ಮಾಡಿ ಜು.21ರೊಳಗೆ ಸಲ್ಲಿಸಬಹುದು.