

ತುಮಕೂರು: ಕೊರಟಗೆರೆ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಫಿನ್-2.0 ಯೋಜನೆಯಡಿ ಮಾಹಿತಿ, ಶಿಕ್ಷಣ ಮತ್ತು ಸಂವಹನ(ಐಇಸಿ) ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಗೌರವಧನ ಆಧಾರದ ಮೇಲೆ ಕಮ್ಯುನಿಟಿ ಮೊಬಿಲೈಸರ್ ಹುದ್ದೆಯನ್ನು ಭರ್ತಿ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ-ಡೇ ಯೋಜನೆಯಡಿ ನೋಂದಾಯಿತಗೊಂಡಿರುವ ಸ್ವ-ಸಹಾಯ ಗುಂಪುಗಳ ಸದಸ್ಯರಾಗಿರಬೇಕು.
ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಲಾಗುವುದು. ಅರ್ಜಿಯನ್ನು ಜೂನ್ 6ರೊಳಗಾಗಿ ಕೊರಟಗೆರೆ ಪಟ್ಟಣ ಪಂಚಾಯಿತಿ ಕಾರ್ಯಾಲಯಕ್ಕೆ ಖುದ್ದಾಗಿ ಸಲ್ಲಿಸಬಹುದು.