

ತುಮಕೂರು: ಚಿ.ನಾ.ಹಳ್ಳಿ, ಗುಬ್ಬಿ, ಕುಣಿಗಲ್, ತಿಪಟೂರು, ತುಮಕೂರು, ತುರುವೇಕೆರೆ ತಾಲ್ಲೂಕುಗಳಲ್ಲಿ ಖಾಲಿ ಇರುವ ಬಿ.ಐ.ಇ.ಆರ್.ಟಿ.(ಪ್ರಾಥಮಿಕ) 4 ಹಾಗೂ ಬಿ.ಐ.ಇ.ಆರ್.ಟಿ.(ಪ್ರೌಢ) 7 ವಿಶೇಷ ಶಿಕ್ಷಕರ ಹುದ್ದೆಯನ್ನು ತಾತ್ಕಾಲಿಕವಾಗಿ ನೇರ ಗುತ್ತಿಗೆಯಡಿ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ವಿಶೇಷ ಶಿಕ್ಷಣದಲ್ಲಿ ಬಿ.ಎ., ಬಿ.ಇಡಿ., ವಿಶೇಷ ಬಿ.ಇಡಿ. ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ಡಿಡಿಪಿಐ ಕಚೇರಿ ಸಂಪರ್ಕಿಸಿ.