

ತುಮಕೂರು: ತುಮಕೂರು ತಾಲೂಕಿನ ಪರಿಶಿಷ್ಟ ಪಂಗಡ ಜನಾಂಗದವರ ಏಳಿಗೆಗಾಗಿ ಶ್ರಮಿಸಿದ ಹಾಗೂ ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಮತ್ತು ಇತರೆ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಅಕ್ಟೋಬರ್ 7ರಂದು ರಾಜ್ಯ ಮಟ್ಟದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಸಾಧಕರು ಸಹಾಯಕ ನಿರ್ದೇಶಕ, ಸಮಾಜ ಕಲ್ಯಾಣ ಇಲಾಖೆ, ತಾಲೂಕು ಕಚೇರಿ, ಜಿಪಂ ಕಚೇರಿ ಪಕ್ಕ, ಬಿ.ಹೆಚ್.ರಸ್ತೆ, ತುಮಕೂರು ಇವರಿಂದ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 10ರೊಳಗಾಗಿ ಸಲ್ಲಿಸಬಹುದು.