ವಿವಿಧ ಸೌಲಭ್ಯಕ್ಕಾಗಿ ಅರ್ಜಿ

Published on

ತುಮಕೂರು: ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಕಲ್ಪಿಸಲು ಆನ್​ಲೈನ್​ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಕಲ್ಪಿಸಲು ಕಾಡುಗೊಲ್ಲ ಜನಾಂಗದವರಿಂದ ಆನ್​ಲೈನ್​ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ಸಾಲ, ಗಂಗಾಕಲ್ಯಾಣ ನೀರಾವರಿ, ಅರಿವು-ಶೈಕ್ಷಣಿಕ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ, ಸ್ವಾವಲಂಬಿ ಸಾರಥಿ, ಸ್ವಯಂ ಉದ್ಯೋಗ ಸಾಲ(ವಾಣಿಜ್ಯ ಬ್ಯಾಂಕ್​ಗಳ ಸಹಯೋಗದೊಂದಿಗೆ) ಹಾಗೂ ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಪಡೆಯಲಿಚ್ಛಿಸುವ ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್​ ಮೂಲಕ ಗ್ರಾಮ ಒನ್​, ಬೆಂಗಳೂರು ಒನ್​, ಕರ್ನಾಟಕ ಒನ್​ ಮತ್ತು ತುಮಕೂರು ಒನ್​ ಸೇವಾಕೇಂದ್ರಗಳ ಮೂಲಕ ಜೂನ್​ 30ರೊಳಗೆ ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್​ಸೈಟ್​ ಡಿಡಿಡಿ.ಞಞಛ.ಚ್ಟ್ಞಚಠಿಚಚ.ಜಟಡ.ಜ್ಞಿ ಅಥವಾ ದೂ.080- 22374832, 8050770004, 8050770005 ಅಥವಾ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂ. 0816- 2005008 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net