

ತುಮಕೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಕಲ್ಪಿಸಲು ಅರ್ಹ ಮತೀಯ ಅಲ್ಪಸಂಖ್ಯಾತದವರಿಂದ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ವೃತ್ತಿ ಪ್ರೋತ್ಸಾಹ, ಶ್ರಮಶಕ್ತಿ, ಸ್ವಾವಲಂಬಿ ಸಾರಥಿ, ನೇರ ಸಾಲ ವ್ಯಾಪಾರ ಉದ್ದಿಮೆ, ವಿದೇಶಿ ವ್ಯಾಸಂಗಕ್ಕಾಗಿ ಸಾಲ, ಸಾಂತ್ವನ ಯೋಜನೆ, ರೇಷ್ಮೆ ನೂಲು ಬಿಚ್ಚಾಣಿಕೆ ಯೋಜನೆಯಡಿ ಸಾಲ ಸೌಲಭ್ಯ ನೀಡಲಾಗುವುದು. ಆಸಕ್ತರು ಆನ್ಲೈನ್ ಮೂಲಕ ಅಕ್ಟೋಬರ್ 16ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಅಜಾದ್ ಭವನ, ಇಂದಿರಾ ಕಾಲೇಜು ಮುಂಭಾಗ, ಉಪ್ಪಾರಹಳ್ಳಿ, ತುಮಕೂರು. ಸಂಪರ್ಕಿಸಿ.