ಇಂಜಿನಿಯರಿಂಗ್​ ಪದವೀಧರರಿಂದ ಅರ್ಜಿ

Adarsha Shakshaka Prashasti Application
Published on

ತುಮಕೂರು: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ IISc, IIT & NIT ಸಂಸ್ಥೆಗಳ ಮೂಲಕ ಆರ್ಟಿಫಿಷಿಯಲ್​ ಇಂಟೆಲಿಜೆನ್ಸ್​ ಅಂಡ್​ ಮೆಷಿನ್​ ಲರ್ನಿಂಗ್​ ವೃತ್ತಿಪರ ತರಬೇತಿ ಕೋರ್ಸ್​ಗಳಿಗಾಗಿ ಪರಿಶಿಷ್ಟ ಪಂಗಡದ ಇಂಜಿನಿಯರಿಂಗ್​ ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಯ್ಕೆಯಾದವರಿಗೆ 15000 ರೂ. ಶಿಷ್ಯವೇತನ ನೀಡಲಾಗುವುದು. ಆಸಕ್ತರು ಏ.11ರೊಳಗಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆ ಮತ್ತಿತರ ಹೆಚ್ಚಿನ ಮಾಹಿತಿಗೆ ತುಮಕೂರು, ಮಧುಗಿರಿ, ಶಿರಾ, ಚಿಕ್ಕನಾಯಕನಹಳ್ಳಿ, ಕೊರಟಗೆರೆ, ಗುಬ್ಬಿ, ತಿಪಟೂರು, ತುರುವೇಕೆರೆ, ಕುಣಿಗಲ್​ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ, ಪಾವಗಡ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net