ಸರ್ಕಾರಿ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ದಾಖಲಾತಿ

teacher
Published on

ತುಮಕೂರು: ಶಿರಾ ತಾಲೂಕು ಚಿಕ್ಕನಹಳ್ಳಿಯಲ್ಲಿರುವ ಸರ್ಕಾರಿ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ 2024-25ನೇ ಸಾಲಿನಲ್ಲಿ ಶಿಕ್ಷಕರ(ಡಿ.ಇಎಲ್​.ಇಡಿ) ತರಬೇತಿ ನೀಡಲು ದಾಖಲಾತಿ ಪ್ರಾರಂಭವಾಗಿದೆ. ಅರ್ಜಿ ಸಲ್ಲಿಸುವ ಜು.31ರ ವರೆಗೆ ವಿಸ್ತರಿಸಲಾಗಿದೆ ಎಂದು ಪ್ರಾಚಾರ್ಯ ತಿಮ್ಮರಾಜು ತಿಳಿಸಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಪ್ರವೇಶ ಉಚಿತವಾಗಿದ್ದು, ಸಾಮಾನ್ಯ ವಿದ್ಯಾರ್ಥಿಗಳಿಗೆ 3500 ರೂ. ಶುಲ್ಕ ನಿಗಧಿಪಡಿಸಲಾಗಿದೆ. ಅಲ್ಪಸಂಖ್ಯಾಂತ ವಿದ್ಯಾರ್ಥಿಗಳಿಗೆ 25,000 ರೂ.ಗಳ ವಿದ್ಯಾರ್ಥಿ ವೇತನ ನೀಡಲಾಗುವುದು.


ಮಾಹಿತಿಗೆ ಮೊ.9741069414, 9741507942, 9980870260 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net