

ತುಮಕೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ 2024-&25ನೇ ಸಾಲಿಗೆ ಪರಿಶಿಷ್ಟ ಜಾತಿಯ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ, ಸ್ನಾತಕೋತ್ತರ ಪದವಿ ಹೊಂದಿರುವ ಇಬ್ಬರು ಅಭ್ಯರ್ಥಿಗಳಿಗೆ ತುಮಕೂರು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಕಚೇರಿಯಲ್ಲಿ ಒಂದು ವರ್ಷದ ಅವಧಿಗೆ ಅಪ್ರೆಂಟಿಸ್ ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ಹೆಚ್ಚಿನ ಮಾಹಿತಿಗೆ ಹಿರಿಯ ಸಹಾಯಕ ನಿರ್ದೇಶಕ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಭವನ, ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಪಕ್ಕ, ತುಮಕೂರು. ಇವರನ್ನು ಸಂಪರ್ಕಿಸಿ.