ವಿಶ್ವಕರ್ಮ ಸಮುದಾಯದವರಿಂದ ಅರ್ಜಿ

application
Published on

ತುಮಕೂರು: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ ಯೋಜನೆಗಳಡಿ ಸೌಲಭ್ಯ ಕಲ್ಪಿಸಲು ಅರ್ಹ ವಿಶ್ವಕರ್ಮ ಸಮುದಾಯದವರಿಂದ ಆನ್​ಲೈನ್​ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ, ಅರಿವು-ಶೈಕ್ಷಣಿಕ ನೇರಸಾಲ(ಹೊಸದು), ಗಂಗಾಕಲ್ಯಾಣ, ಸ್ವಯಂ ಉದ್ಯೋಗ ನೇರಸಾಲ(ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ, ವಿದೇಶಿ ವ್ಯಾಸಂಗ ಹಾಗೂ ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.


ಸಾಲ ಸೌಲಭ್ಯ ಪಡೆಯಲಿಚ್ಛಿಸುವವರು ಅರ್ಜಿಯನ್ನು ಆ.31ರೊಳಗಾಗಿ ಸೇವಾಸಿಂಧು ಪೋರ್ಟಲ್​ https://sevasindhu.karnataka.gov.in ಮೂಲಕ ಗ್ರಾಮ ಒನ್​, ಕರ್ನಾಟಕ ಒನ್​, ತುಮಕೂರು ಒನ್​ ಸೇವಾ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿದೆ. ಸ್ವಾತಂತ್ರ್ಯ ಅಮೃತ ಮಹೋತ್ಸವ ಯೋಜನೆಯ ಸೌಲಭ್ಯ ಪಡೆಯಲಿಚ್ಛಿಸುವವರು ಅರ್ಜಿಯನ್ನು ಜಾಲತಾಣ www.kaushalkar.com ನಲ್ಲಿ ಅರ್ಜಿ ಸಲ್ಲಿಸಬಹುದು.

ಮಾಹಿತಿಗೆ ನಿಗಮದ ವೆಬ್​ಸೈಟ್​ https://kvcdcl.karnataka.gov.in ಅಥವಾ ನಿಗಮದ ಕೇಂದ್ರ ಕಚೇರಿ ದೂ.080 -22374848, ಮೊ.7899899039 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂ.0816-2005008 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net