

ತುಮಕೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿ ಸಾಲಸೌಲಭ್ಯ ನೀಡಲು ಜಿಲ್ಲೆಯ ಅಲ್ಪಸಂಖ್ಯಾತ ವರ್ಗದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಇಉಖ/ಉಉಖ ನಲ್ಲಿ ಆಯ್ಕೆಯಾಗುವ ವೈದ್ಯಕಿಯ (ಎಂಬಿಬಿಎಸ್), ಬಿಡಿಎಸ್, ಬಿಇ/ಬಿ.ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಬಿ.ಆಯುಶ್, ಫಾರ್ಮಸಿ, ಕೃಷಿ ವಿಜ್ಞಾನ ಹಾಗೂ ಪಶುವೈದ್ಯಕಿಯ ಹಾಗೂ ಮತ್ತಿತರ ಕೋರ್ಸ್ಗಳಿಗೆ ಆಯ್ಕೆಯಾದ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಹ ವಿದ್ಯಾರ್ಥಿಗಳು ಮೇ.23ರೊಳಗಾಗಿ ನಿಗಮದ ಅಧಿಕೃತ ವೆಬ್ಸೈಟ್ ಜ ಮೂಲಕ ಅರ್ಜಿ ಸಲ್ಲಿಸಬಹುದು.
ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕ ಕಚೇರಿ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನ ಆಜಾದ್ ಭವನ, ಇಂದಿರಾ ಕಾಲೇಜ್ ಮುಂಭಾಗ, ಉಪ್ಪಾರಹಳ್ಳಿ, ತುಮಕೂರು-. ದೂ.0816 -2281023 ಸಂಪರ್ಕಿಸಿ.