ನವಿಲು ಮಾಂಸ ತಿನ್ನುತ್ತಿದ್ದ ಆರೋಪಿಗಳ ಬಂಧನ; ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ

Arrest of accused who ate peacock meat
Published on

ತುಮಕೂರು: ಹುಲಿ ಉಗುರಿನ ಪೆಂಡೆಂಟ್ ಸದ್ದಿನ ಬೆನ್ನಲ್ಲೇ ರಾಷ್ಟ್ರಪಕ್ಷಿ ನವಿಲು ಮಾಂಸ ಭಕ್ಷಣೆಗೆ ಮುಂದಾಗಿದ್ದ ಮೂವರನ್ನು ತುಮಕೂರಿನ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.

ತಾಲೂಕಿನ ಮಾರನಾಯಕನಪಾಳ್ಯದ ಬಳಿಯ ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಒಡಿಶಾ ಮೂಲದ ಬಿಟ್ಟಿಂಗ್ ನಾಯಕ್, ಬೈಷಾಕ್‌ದಾವು, ದುಬಾ ಕಾಪತ್ ಬಂಧಿತ ಆರೋಪಿಗಳು.

ಕಳೆದ ಹಲವು ದಿನಗಳಿಂದ ನವಿಲುಗಳನ್ನ ಕೊಂದು ಭಕ್ಷಿಸುತ್ತಿದ್ದ ಬಂಧಿತರು. ಈ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಅರಣ್ಯಾಧಿಕಾರಿಗಳು 1.5 ಕೆಜಿ ನವಿಲಿನ ಹಸಿ ಮಾಂಸ, ನವಿಲಿನ ಎರಡು ಕಾಲುಗಳು,ಬೇಯಿಸಿದ ಮಾಂಸ, ನವಿಲು ಹಿಡಿಯಲು ಬಳಸಿದ್ದ ಬಲೆಗಳು, ಉರುಳುಗಳು, ಮಾಂಸ ಬೇಯಿಸಿದ್ದ ಪಾತ್ರೆ ವಶಕ್ಕೆ ಪಡೆದಿದ್ದಾರೆ.

ವಶಕ್ಕೆ ಪಡೆದ ಮಾಂಸವನ್ನ ವಿಧಿ ವಿಜ್ಞಾನ ಪ್ರಯೋಗಲಾಯಕ್ಕೆ ಕಳುಹಿಸಿದ್ದು ಬಂಧಿತರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net