

ತುಮಕೂರು: ಆರ್‌ಸಿಎಚ್ ಪೋರ್ಟಲ್ (ಆಶಾ ನಿಧಿ) ಮೂಲಕ ಪ್ರೋತ್ಸಾಹಧನ ನೀಡುವುದನ್ನು ರದ್ದುಪಡಿಸಿ ಮಾಸಿಕ ಗೌರವಧನ ನಿಗದಿಪಡಿಸುವಂತೆ ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ನಗರದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.
ನಗರದ ಬಿಜಿಎಸ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ನೂರಾರು ಆಶಾ ಕಾರ್ಯಕರ್ತೆಯರು ಪ್ರತಿಭಟನಾ ಮೆರವಣಿಗೆ ನಡೆಸಿ, ಪ್ರೋತ್ಸಾಹಧನ ಬದಲಿಗೆ ಮಾಸಿಕ ಗೌರವಧನ ನೀಡಬೇಕು. ಆಶಾ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಬೇಕು ಹಾಗೂ ಸೇವಾ ನಿವೃತ್ತಿ ಇಡಗಂಟು ಹೆಚ್ಚಳ ಮಾಡುವಂತೆ ಘೋಷಣೆಗಳನ್ನು ಕೂಗಿದರು.
ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಂಚಾಲಕಿ ಮಂಜುಳಾ, ನಿರ್ಮಲ, ವಾಣಿ, ಮೀನಾಕ್ಷಿ, ಯಶೋದಾ ಮತ್ತಿತರರು ನೇತೃತ್ವ ವಹಿಸಿದ್ದರು.