ಸಿದ್ಧಗಂಗಾ ಮಠಕ್ಕೆ ಆರ್.ಅಶೋಕ್ ಭೇಟಿ; ಜಿಲ್ಲೆಯಲ್ಲಿ ಬರ ಅಧ್ಯಯನ

Ashook
Published on

ತುಮಕೂರು: ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಶನಿವಾರ ರಾತ್ರಿ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಡಾ.ಶಿವಕುಮಾರಸ್ವಾಮೀಜಿ ಗದ್ದುಗೆಯ ದರ್ಶನ ಪಡೆದು, ಶ್ರೀಸಿದ್ಧಲಿಂಗಸ್ವಾಮೀಜಿ ಆಶಿರ್ವಾದ ಪಡೆದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಚಳಿಗಾಲದ ಅಧಿವೇಶನದಲ್ಲಿ ಬರಗಾಲದ ವಿಚಾರ ಪ್ರಮುಖವಾಗಿ ಚರ್ಚೆಯಾಗಬೇಕು, ರೈತರಿಗೆ ಮತ್ತು ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆ ಬಗ್ಗೆ ಸರ್ಕಾರಕ್ಕೆ ಚಾಟಿ ಬೀಸುತ್ತೇವೆ ಎಂದರು.

ರೈತರು ಜಮೀನುಗಳಲ್ಲಿ ವಿದ್ಯುತ್ ಪರಿವರ್ತಕ ಅಳವಡಿಸುವಾಗಲೂ ಗ್ರೌಂಡಿAಗ್ ಗುಂಡಿಗೆ ಉಪ್ಪು ಕೂಡ ರೈತರೇ ಕೊಡುವ ಸ್ಥಿತಿಯಿದೆ, ಈ ಸರ್ಕಾರದ ಯೋಗ್ಯತೆಗೆ ಕನಿಷ್ಟ ಉಪ್ಪು ಕೂಡ ಕೊಡೋಕಾಗ್ತಿಲ್ಲ ಎಂದರು.

ರೈತರ ಸಮಸ್ಯೆ ಏನು ಅನ್ನೋದನ್ನ ಅವರಿಂದಲೇ ಕೇಳಿ ತಿಳಿದುಕೊಳ್ತಿದ್ದೀವಿ, ಇವೆಲ್ಲ ಬೆಳವಣಿಗೆಯನ್ನು ನೋಡಿದ್ರೆ ಸರ್ಕಾರ ಗೋವಿಂದ ಆಗಲಿದೆ, ಲೋಕಸಭಾ ಚುನಾವಣೆ ಬಳಿಕ ಈ ಸರ್ಕಾರ ಗೋವಿಂದ ಆಗಲಿದೆ ಎಂದು ಭವಿಷ್ಯ ನುಡಿದರು.

ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರವನ್ನು ಬೀಳಿಸಲು ಈ ಹಿಂದೆ ಬೆಳಗಾವಿಯಲ್ಲಿ ಪ್ಲಾನ್ ರಡಿಯಾಗಿತ್ತು, ಈಗಲೂ ಅಲ್ಲಿಂದಲೇ ತಯಾರಿ ನಡೀತಾ ಇದೆ ಎಂದರು.

ಬಿಜೆಪಿಯಲ್ಲಿ ಯಾವುದೇ ಅಸಮಧಾನ ಇಲ್ಲ, ಡಿ.ಟಿ.ರವಿಯವರು ಈಗಾಗಲೇ ವಿಜಯೇಂದ್ರ ಅವರನ್ನು ಭೇಟಿ ಮಾಡಿದ್ದು, ಇನ್ನೂ ಮೂವರು ಇರಬಹುದಷ್ಟೇ,
ರಮೇಶ್ ಜಾರಕಿಹೊಳಿ ಮನೆಗೆ ವಿಜಯೇಂದ್ರ ಹೋಗಿ ಮಾತುಕತೆ ಮಾಡಿದ್ದು ಅವರು ಸಮ್ಮನಾಗಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಮುನಿರಾಜು ಮತ್ತಿತರರು ಇದ್ದರು. ಭಾನವಾರ ಬೆಳಗ್ಗೆ ಶಿರಾ ತಾಲೂಕು ದೇವರಹಳ್ಳಿಯಲ್ಲಿ ಬರ ಅಧ್ಯಯನ ನಡೆಸಿ, ಚಳ್ಳಕೆರೆಗೆ ಪ್ರಯಾಣ ಮುಂದುವರಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net