ಆಟೋ ಚಾಲಕ, ಕಾರ್ಮಿಕರ ನೋಂದಣಿ ಅಭಿಯಾನ

chennai auto drivers
Published on

ತುಮಕೂರು: ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯ ಯೋಜನೆಯಡಿ ಆಟೋ ಚಾಲಕರು ಹಾಗೂ ಇಶ್ರಮ್​ ಯೋಜನೆಯಡಿ ವಿವಿಧ ವರ್ಗದ ಕಾರ್ಮಿಕರನ್ನು ನೋಂದಣಿ ಮಾಡುವ ಅಭಿಯಾನವನ್ನು ಮೇ.5ರಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಾಂಕೇತಿಕವಾಗಿ ಹಮ್ಮಿಕೊಳ್ಳಲಾಗಿದೆ.

ಈ ಯೋಜನೆ ಕರ್ನಾಟಕ ರಾಜ್ಯಕ್ಕೆ ಮಾತ್ರ ಅನ್ವಯಿಸುತ್ತದೆ. ಅಭಿಯಾನದಲ್ಲಿ ನೋಂದಾಯಿಸುವವರ ವಯೋಮಿತಿ 18 ರಿಂದ 60 ವರ್ಷದೊಳಗಿರಬೇಕು. ಆದಾಯ ತೆರಿಗೆ ಪಾವತಿದಾರರಾಗಿರಬಾರದು.

ಇಪಿಎಫ್​ ಹಾಗೂ ಇಎಸ್​ಐ ಸೌಲಭ್ಯ ಹೊಂದಿರಬಾರದು. ಯೋಜನೆಯ ಸೌಲಭ್ಯಗಳು ಕರ್ತವ್ಯದಲ್ಲಿರುವಾಗ ಹಾಗೂ ಇಲ್ಲದಿರುವಾಗಲೂ ಸಹ ಲಭ್ಯವಾಗುತ್ತವೆ. ಚಾಲಕರು, ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯಿಂದ ವಾಣಿಜ್ಯ ವಾಹನ ಚಲಾಯಿಸಲು ಊರ್ಜಿತ ಚಾಲನಾ ಪರವಾನಗಿಯನ್ನು ಹೊಂದಿರುವುದು ಕಡ್ಡಾಯವಾಗಿದೆ.

ಅರ್ಹರು ಪಾಸ್​ ಪೋರ್ಟ್​ ಅಳತೆಯ ಇತ್ತೀಚಿನ ಭಾವಚಿತ್ರ, ಆಧಾರ್​ ಕಾರ್ಡ್​ ಪ್ರತಿ, ಊರ್ಜಿತ ಚಾಲನಾ ಪರವಾನಗಿ, ಬ್ಯಾಂಕ್​ ಪಾಸ್​ಪುಸ್ತಕದೊಂದಿಗೆ ಅಭಿಯಾನದಲ್ಲಿ ಭಾಗವಹಿಸಿ ನೋಂದಣಿ ಮಾಡಿಕೊಳ್ಳಬಹುದು.

===

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net