

ತುಮಕೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಡಾ.ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ ಅಂಗವಾಗಿ ಪ್ರಶಸ್ತಿ ನೀಡಲಾಗುವುದು. ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಫೆ.27ರೊಳಗೆ ಆಯಾ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು.